- This event has passed.
ದಿ.ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹುಟ್ಟು ಹಬ್ಬ ಆಚರಣೆ.
December 26, 2020 - December 27, 2020
ಬಿ.ವೈ.ವಿಜಯೇಂದ್ರ ಬೇಟಿ: ನೆಲಮಂಗಲದ ಬಸವಣ್ಣ ದೇವರ ಮಠದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ. ದಿ.ಮಾಜಿ ಪ್ರಧಾನಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ರಕ್ತದಾನ ಶಿಬಿರ ಅಭಿನಂದನಾ ಕಾರ್ಯಕ್ರಮಕ್ಕೆ ಬೇಟಿ ನೀಡಿದ್ದ ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಶ್ರೀ ಸಿದ್ಧಲಿಂಗಸ್ವಾಮೀಜಿ ಆಶೀರ್ವಾದ ಪಡೆದರು. ಬೆಂಗಳೂರು ನಗರ ಜಿ.ಪಂ ಸದಸ್ಯ ಮರಿಸ್ವಾಮಿ ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಬಿ.ಹೊಂಬಯ್ಯ ಮತ್ತಿತರರು ಇದ್ದರು.
ಪಟ್ಟಣದ ಪವಾಡ ಶ್ರೀ ಬಸವಣ್ಣ ದೇವರ ಮಠದಲ್ಲಿ ಬಿಜೆಪಿ ಕಾರ್ಯಕರ್ತರು ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಹುಟ್ಟು ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ದಿ.ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ದೂರದೃಷ್ಟಿ ಚಿಂತನೆಗಳು ದೇಶದ ಅಭಿವೃದ್ಧಿಗೆ ಮಾರ್ಗದರ್ಶಿಯಾಗಿವೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಬಿ.ಹೊಂಬಯ್ಯ ತಿಳಿಸಿದರು.
ಹೋರಾಟಗಳ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸಿದ ವಾಜಪೇಯಿ ತತ್ವ ಆದರ್ಶಗಳು ಅನುಸರಣೀಯ. ದೇಶಕಂಡ ಶ್ರೇಷ್ಠ ರಾಜಕಾರಣಿಯಾಗಿದ್ದ ವಾಜಪೇಯಿ ಅವರನ್ನು ಮಾದರಿಯಾಗಿಟ್ಟುಕೊಂಡು ಬೆಳೆದಲ್ಲಿ ಹುಟ್ಟು ಹಬ್ಬದ ಆಚರಣೆ ಸಾರ್ಥಕವಾಗಲಿದೆ. ಹುಟ್ಟು ಹಬ್ಬದ ದಿನದಂದು ರಕ್ತದಾನಶಿಬಿರದ ಜತೆಗೆ ಕ್ಷೇತ್ರದ ಪಕ್ಷ ಸಂಘಟನೆಯ ಸಾರಥ್ಯವಹಿಸಿರುವ ಅಧ್ಯಕ್ಷ ಪದಾಧಿಕಾರಿಗಳಿಗೆ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಂಡಿರುವುದು ಅರ್ಥಪೂರ್ಣವಾಗಿದೆ. ಕಾರ್ಯಕರ್ತರು ಭಿನ್ನಾಭಿಪ್ರಾಯ ಗೊಂದಲ ಮಾಡಿ ಮಾಡಿಕೊಳ್ಳದೇ ನೂತನ ಪದಾಧಿಕಾರಿಗಳಿಗೆ ಪ್ರತಿಯೊಬ್ಬ ಕಾರ್ಯಕರ್ತರು ಸಹಕಾರ ನೀಡಿ ಪಕ್ಷ ಸಂಘಟನೆಗೆ ಮುಂದಾಗಬೇಕು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲವು ಸಾಧಿಸಬೇಕು ಎಂದರು.
ನೂತನ ಬಿಜೆಪಿ ಮಂಡಲ ಅಧ್ಯಕ್ಷ ಹೇಮಂತ್‍ಕುಮಾರ್ ಮಾತನಾಡಿ ಪಕ್ಷದ ವರಿಷ್ಠರು ಗುರುತಿಸಿ ನೀಡಿರುವ ಅವಕಾಶವನ್ನು ಅಧಿಕಾರವೆಂದು ತಿಳಿಯದೇ ಜವಬ್ದಾರಿ ಎಂದು ಭಾವಿಸಿದ್ದೇನೆ. ಕ್ಷೇತ್ರದ ಎಲ್ಲ ಬೂತ್ ಮಟ್ಟದ ಕಾರ್ಯಕರ್ತರ ಸಹಕಾರ ಪಡೆದುಕೊಂಡು ಕ್ಷೇತ್ರದಲ್ಲಿ ಕಮಲವನ್ನು ಅರಳಿಸುವ ಕೆಲಸ ಮಾಡುವುದಾಗಿ ಶೀಘ್ರದಲ್ಲಿ ಕ್ಷೇತ್ರದ ಪ್ರವಾಸ ಕೈಗೊಂಡು ಎಲ್ಲ ಕಾರ್ಯಕರ್ತರನ್ನು ಸಂಪರ್ಕಿಸಲಾಗುವುದು. ಜೀವದಾನ ಮಾಡಬಲ್ಲ ರಕ್ತದಾನ ಮಾಡಿದ ವಿವಿಧ ಕಾಲೇಜು ಯುವಕ ಯುವತಿಯರ ಕಾರ್ಯ ಪ್ರಶಂಸನೀಯ ಎಂದರು.
ಅಭಿನಂದನೆ: ಕ್ಷೇತ್ರ ಬಿಜೆಪಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಹೇಮಂತ್‍ಕುಮಾರ್ ಪ್ರಧಾನ ಕಾರ್ಯದರ್ಶಿ ರವಿಕುಮಾರ್,ಮಂಜುನಾಥ್ ಅವರನ್ನು ಅಭಿನಂದಿಸಿ ಶುಭಕೋರುವುದರ ಜತೆಗೆ ಕ್ಷೇತ್ರದ ಹಿರಿಯ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರನ್ನು ಗೌರವಿಸಿ ಸನ್ಮಾನಿಸಲಾಯಿತು. ರಕ್ತದಾನ ಶಿಬಿರದಲ್ಲಿ ಸುಮಾರು 95 ಯುನಿಟ್ ರಕ್ತ ಸಂಗ್ರಹವಾಗಿದ್ದು ರಾಷ್ಟ್ರೋತ್ಥಾನ ರಕ್ತನಿಧಿಗಾರಕ್ಕೆ ಕಳಿಸಲಾಯಿತು. ವಾಜಪೇಯಿ ಹುಟ್ಟು ಹಬ್ಬದ ಪ್ರಯುಕ್ತ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಬೇಟಿ ನೀಡಿದ್ದು ನೂತನ ಬಿಜೆಪಿ ಪದಾಧಿಕಾರಿಗಳನ್ನು ಅಭಿನಂದಿಸಿದರು.
ಶ್ರೀಗಳಿಂದ ಆಶೀರ್ವಾದ: ಇದೇ ವೇಳೆ ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಬಸವಣ್ಣ ದೇವರ ಮಠಕ್ಕೆ ಬೇಟಿ ನೀಡಿ ಶ್ರೀ ಸಿದ್ಧಲಿಂಗಸ್ವಾಮೀಜಿ ಆಶೀರ್ವಾದ ಪಡೆದರು .
ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಸದಸ್ಯ ಪ್ರಕಾಶ್, ನರಸೀಪುರ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಎನ್.ರಾಮು, ನೆ.ಯೋ.ಪ್ರಾಧಿಕಾರ ಮಾಜಿ ಅಧ್ಯಕ್ಷ ಕೆ.ಪಿ.ಆನಂದ್, ಕ್ಷೇತ್ರ ಬಿಜೆಪಿ ಮಾಜಿ ಅಧ್ಯಕ್ಷ ಸುಬ್ಬರಾಯಪ್ಪ, ಜಗದೀಶ್ ಪ್ರಸಾದ್, ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷ ಕೆ.ಪಿ.ಬೃಂಗೀಶ್, ಮುಖಂಡ ತೀರ್ಥೇಶ್, ಆಂಜನಮೂರ್ತಿ, ಆನಂದ್, ಮುನಿರಾಮಯ್ಯ, ಪುನೀತ್, ರಾಜಮ್ಮ, ಸೌಮ್ಯ, ಸೌಭಾಗ್ಯಮ್ಮ, ಬಿಜೆಪಿ ಸ್ಲಂ ಮೋರ್ಚಾ ಜಿಲ್ಲಾಧ್ಯಕ್ಷ ರವಿಕುಮಾರ್, ಗುಡೇಮಾರನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿಹೇಮಂತ್‍ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.